ಕುವೈತ್: ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಲ್ವತ್ತೊಂದು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ನಡೆದಿರುವುದಾಗಿ ಸರಕಾರಿ ಮಾಧ್ಯಮ ವರದಿ ಮಾಡಿದೆ.
ಮಾಧ್ಯಮಗಳ ವರದಿಗಳ ಪ್ರಕಾರ, ಅಗ್ನಿ ದುರಂತದಲ್ಲಿ ಕನಿಷ್ಠ ನಾಲ್ವರು ಭಾರತೀಯರು ಸಹ ಸೇರಿದ್ದಾರೆ ಎಂದು ಹೇಳಲಾಗಿದ್ದು ಈ ಕತಂಡದಲ್ಲಿ ಕೇರಳಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು ಎಂಬುದಾಗಿ ವರದಿ ಮಾಡಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಕೆರಳದ ರು ಎಂದು ಹೇಳಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ವರದಿಯ ಪ್ರಕಾರ ಘಟನೆಯಿಂದ ಹಲವಾರು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಬುಧವಾರ ಮುಂಜಾನೆ 4:30 ರ ಸುಮಾರಿಗೆ ಕಾರ್ಮಿಕರು ವಾಸವಿದ್ದ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕಟ್ಟಡದಲ್ಲಿದ್ದ ಜನರು ತಮ್ಮ ಜೀವ ಉಳಿಸಿಕೊಳ್ಳಲು ಬಹುಮಹಡಿ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದು ಇನ್ನು ಕೆಲವರು ಕಟ್ಟಡದೊಳಗೆ ಸಿಲುಕಿ ಉಸಿರುಗಟ್ಟಿ ಜೀವ ಕಳೆದುಕೊಂಡಿದ್ದಾರೆ ಈ ವೇಳೆ ಕೆಲವರು ಕಟ್ಟಡದಿಂದ ಜಿಗಿದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಅವಘಡದಲ್ಲಿ ಭಾರತದ ನಾಲ್ವರು ಮೃತಪಟ್ಟಿದ್ದು ಅವರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.