Advertisement

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

02:50 PM Oct 25, 2024 | Team Udayavani |

ಒಟ್ಟಾವಾ: ಕೆನಡಾದ ಟೊರೊಂಟೊ ಪೋರ್ಟ್ ಲ್ಯಾಂಡ್ಸ್ ಬಳಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆ ಗುರುವಾರ(ಅ.24) ಮಧ್ಯರಾತ್ರಿ ಸಂಭವಿಸಿರುವುದಾಗಿ ವರದಿಯಾಗಿದೆ.

Advertisement

ಮೃತಪಟ್ಟವರನ್ನು ಗುಜರಾತ್‌ ನ ಗೋಧ್ರಾ ಮೂಲದ ಕೇತಾ ಗೋಹಿಲ್(30) ಮತ್ತು ನೀಲ್ ಗೋಹಿಲ್( 26) ಎಂದು ಗುರುತಿಸಲಾಗಿದ್ದು ಇನ್ನಿಬ್ಬರ ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ ಎನ್ನಲಾಗಿದೆ.

ಐವರು ಪ್ರಯಾಣಿಸುತ್ತಿದ್ದ ಕಾರು ಟೊರೊಂಟೊ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಮತ್ತೋರ್ವ ಯುವತಿ ಗಂಭೀರ ಗಾಯಗೊಂಡಿದ್ದು ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

Advertisement
Advertisement

Udayavani is now on Telegram. Click here to join our channel and stay updated with the latest news.

Next