Advertisement

ಬೈಕುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ

09:23 PM Nov 03, 2020 | sudhir |

ಕಲಬುರಗಿ: ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ದುರ್ಘಟನೆ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

Advertisement

ಎರಡೂ ಬೈಕ್’ಗಳಲ್ಲಿ ತಲಾ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಜರುಗಿದ್ದು, ಮೂವರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದ್ದಾರೆ.

ಲಾಡ್ಲಾಪುರ ಗ್ರಾಮದ ಮರೆಪ್ಪ (50), ಬಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ (50) ಹಾಗೂ ಮಲ್ಲಪ್ಪ ರಾಯಪ್ಪ (35) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಉಳಿದ ಹನಮಂತ ಹಾಗೂ ಕಾಶಿನಾಥ ಎಂಬುವರು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಬಂಗಾಳಕೊಲ್ಲಿಯಲ್ಲಿ ಮಲಬಾರ್‌ ಸಮರಾಭ್ಯಾಸ !ಭಾರತ, ಅಮೆರಿಕ, ಜಪಾನ್‌, ಆಸ್ಟ್ರೇಲಿಯಾ ಭಾಗಿ

ಈ ಬಗ್ಗೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next