Advertisement

ಕೋವಿಡ್ ನಿಂದ ಮೃತ ಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡುವ ಸುದ್ದಿ ಸುಳ್ಳು :ಜಿ. ಜಗದೀಶ್

01:48 PM May 30, 2021 | Team Udayavani |

ಉಡುಪಿ :  ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಈ ಬಗ್ಗೆ ಅರ್ಜಿಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ.

Advertisement

ಆದರೆ ಅಂತಹ ಯಾವುದೇ ಯೋಜನೆ ಇಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ ಸೋಂಕಿನಿಂದ ಮೃತ ಪಟ್ಟ ಮಂದಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಎಂದು ತಪ್ಪು ಮಾಹಿತಿಯನ್ನು ಹರಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next