ಡೆಹ್ರಾಡೂನ್: ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಭೀಮತಾಲ್ ಪಟ್ಟಣದ ಬಳಿ ಬುಧವಾರ (ಡಿ.25 ರಂದು) ನಡೆದಿರುವುದು ವರದಿಯಾಗಿದೆ.
ಅಲ್ಮೋರಾದಿಂದ ಹಲ್ದ್ವಾನಿಗೆ ಹೊರಟಿದ್ದ ಬಸ್ ಭೀಮತಾಲ್ ಬಳಿ ನಿಯಂತ್ರಣ ತಪ್ಪಿ 100 -150 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಪರಿಣಾಮ ಹಲವು ಪ್ರಯಾಣಿಕರು ಬಸ್ನಿಂದ ಕೆಳಕ್ಕೆ ಬಿದ್ದಿದ್ದಾರೆ.
ಬಸ್ಸಿನಲ್ಲಿ 20 -25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಪೊಲೀಸರು, ಎಸ್ಡಿಆರ್ಎಫ್ ತಂಡಗಳು, ಅಗ್ನಿಶಾಮಕ ಅಧಿಕಾರಿಗಳು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹಗ್ಗಗಳನ್ನು ಬಳಸಿ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.
ವರದಿಗಳ ಪ್ರಕಾರ ನಾಲ್ವರು ಘಟನೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಪೈಕಿ ಕೆಲ ಪ್ರಯಾಣಿಕರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಸಿದೆ.
ಸದ್ಯ ಹಲ್ದ್ವಾನಿಯಿಂದ ಅಪಘಾತ ನಡೆದ ಸ್ಥಳಕ್ಕೆ ಹದಿನೈದು ಆಂಬ್ಯುಲೆನ್ಸ್ಗಳನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.