Advertisement

Pune; Truck-Bus ಡಿಕ್ಕಿ; 4 ಮೃತ್ಯು, 22ಕ್ಕೂ ಅಧಿಕ ಮಂದಿಗೆ ಗಾಯ

11:46 AM Apr 23, 2023 | Team Udayavani |

ಮಹಾರಾಷ್ಟ್ರ: ನಗರದ ನಾರ್ಹೆ ಪ್ರದೇಶದ ಬಳಿ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ರವಿವಾರ ಬೆಳಗ್ಗೆ ಟ್ರಕ್ ಹಾಗೂ ಖಾಸಗಿ ಬಸ್​ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ಟ್ರಕ್‌ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್‌ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

ಬಸ್​ ಗೋರೆಗಾಂವ್​ನ ಸಂಸ್ಥೆಯೊಂದಕ್ಕೆ ಸೇರಿದ್ದಾಗಿದೆ. ಯಾವುದೋ ಕಾರ್ಯಕ್ರಮದ ನಿಮಿತ್ತ ಪುಣೆಗೆ ತೆರಳಿತ್ತು, ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳ ಪರಿಶೀಲನೆ ನಡೆಸುತ್ತಿದ್ದು ತನಿಖೆ ನಡೆಸುತ್ತಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next