Advertisement

ಉತ್ತರಪ್ರದೇಶ: ನೋಯ್ಡಾದಲ್ಲಿ ಗೋಡೆ ಕುಸಿದು ಬಿದ್ದು ನಾಲ್ವರು ಕಾರ್ಮಿಕರ ಸಾವು

11:25 AM Sep 20, 2022 | Team Udayavani |

ನವದೆಹಲಿ:ಅಪಾರ್ಟ್ ಮೆಂಟ್ ಕಟ್ಟಡದ ಆವರಣದ ಗೋಡೆ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ (ಸೆಪ್ಟೆಂಬರ್ 20) ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ನಮೀಬಿಯಾದಿಂದ ಬಂದ ಎಂಟು ಚೀತಾಗಳನ್ನು ಕಾಯುತ್ತಿರುವುದು ಎರಡು ಆನೆಗಳು; ಯಾಕೆ ಗೊತ್ತಾ?

ನೋಯ್ಡಾದ ಸೆಕ್ಟರ್ 21ರಲ್ಲಿ ಬೃಹತ್ ಹೌಸಿಂಗ್ ಕಾಂಪ್ಲೆಕ್ಸ್ ನಿರ್ಮಾಣವಾಗುತ್ತಿದ್ದು, ಈ ಸಂದರ್ಭದಲ್ಲಿ ರೆಸಿಡೆನ್ಶಿಯಲ್ ಸೊಸೈಟಿಯ ಆವರಣದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಬುಲ್ಡೋಜರ್ ಮೂಲಕ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡಿರುವ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಕೆಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ತೆರಳಲು ಸೂಚಿಸಿರುವ ಸಿಎಂ, ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ತಿಳಿಸಿರುವುದಾಗಿ ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next