ಜೈಪುರ: ವಿವಾಹ ಸಮಾರಂಭ ಸಂಭ್ರಮದಲ್ಲಿದ್ದ ವೇಳೆ ಅಡುಗೆ ಮನೆಯಲ್ಲಿ ಸಂಭವಿಸಿದ ದುರ್ಘಟನೆಯ ಪರಿಣಾಮ ನಾಲ್ವರು ದುರಂತ ಅಂತ್ಯ ಕಂಡಿದ್ದು, 50 ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧಪುರ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬುರ್ಖಾ ಧರಿಸಿ ನೃತ್ಯ: ನಾಲ್ವರು ವಿದ್ಯಾರ್ಥಿಗಳು ಅಮಾನತು
ಜೋಧ್ ಪುರದಿಂದ 60 ಕಿಲೋ ಮೀಟರ್ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ವರನ ಮೆರವಣಿಗೆ ಹೊರಡುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗಿನ ಉಪಹಾರ ತಯಾರಿಸುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕೆಲವರ ದೇಹ ಶೇ.80ರಿಂದ 100ರಷ್ಟು ಸುಟ್ಟುಹೋಗಿರುವುದಾಗಿ ವರದಿ ವಿವರಿಸಿದೆ. ಘಟನೆಯಲ್ಲಿ ಮನೆಯು ಭಾಗಶಃ ಧ್ವಂಸಗೊಂಡಿದೆ. ಸುಮಾರು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.
Related Articles
ಇದೊಂದು ಗಂಭೀರ ಪ್ರಕರಣವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಎಂಜಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿರುವುದಾಗಿ ವರದಿಯಾಗಿದೆ.