Advertisement

ಛತ್ತೀಸ್‌ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಗಾಯ

08:32 PM Apr 18, 2022 | Team Udayavani |

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸ್‌ ಶಿಬಿರದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸೋಮವಾರ(ಎ.18) ನಡೆದಿದೆ.

Advertisement

ಕಟ್ರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಜೈಗೂರ್‌ ಪೊಲೀಸ್‌ ಶಿಬಿರದ ಮೇಲೆ ರವಿವಾರ ತಡರಾತ್ರಿ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿದೆ ಎಂದು ಪೊಲೀಸ್‌ ಮಹಾನಿರೀಕ್ಷಕ ಸುಂದರರಾಜ್‌ ತಿಳಿಸಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ ಬಂಡುಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಯಲ್ಲಿ ಮೂವರು ಜಿಲ್ಲಾ ಪೊಲೀಸ್‌ ಪಡೆಗೆ ಸೇರಿದವರು ಮತ್ತು ಇನ್ನೊಬ್ಬರು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಐಜಿ ಹೇಳಿದರು.

ಇದನ್ನೂ ಓದಿ:ಮಲ್ಟಿ ಲೆವೆಲ್ ಮಾರ್ಕೆಟಿಂಗ್:ಇಡಿಯಿಂದ ಆ್ಯಮ್‌ವೇ ಇಂಡಿಯಾಗೆ ಸೇರಿದ 757 ಕೋ. ರೂ ಆಸ್ತಿ ಜಪ್ತಿ

Advertisement

ಗಾಯಗೊಂಡ ಸಿಬ್ಬಂದಿಯನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಮತ್ತು ನಂತರ ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರಕ್ಕೆ ಹೆಲಿಕಾಪ್ಟರ್‌ ನಲ್ಲಿ ರವಾನಿಸಲಾಗಿದ್ದು ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next