Advertisement

ಫುಟ್ಬಾಲ್ ಪಂದ್ಯ ವೀಕ್ಷಿಸುತ್ತಿದ್ದವರ ಮೇಲೆ ಏಕಾಏಕಿ ಗುಂಡಿನ ದಾಳಿ; ನಾಲ್ವರು ಸಾವು

09:18 AM Nov 19, 2019 | Team Udayavani |

ಲಾಸ್ ಏಂಜಲೀಸ್: ಫುಟ್ಬಾಲ್ ಪಂದ್ಯ ವೀಕ್ಷಿಸುತ್ತಿದ್ದವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಸೆಂಟ್ರಲ್ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

Advertisement

ಉತ್ತರ ಲಾಸ್ ಏಂಜಲೀಸ್ ನಿಂದ ಸುಮಾರು 320 ಕಿಲೋ ಮೀಟರ್ ದೂರದಲ್ಲಿರುವ ಪ್ರೆಸ್ನೋ ಎಂಬಲ್ಲಿ ಮನೆಯ ಹೊರಭಾಗದಲ್ಲಿ 35 ಮಂದಿ ಫುಟ್ಬಾಲ್ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಫ್ರೆಸ್ನೋ ಡೆಪ್ಯುಟಿ ಪೊಲೀಸ್ ಅಧಿಕಾರಿ ಮೈಕೇಲ್ ರೀಡ್ ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಎಷ್ಟು ಮಂದಿ ಶಾಮೀಲಾಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಒಬ್ಬ ವ್ಯಕ್ತಿ ಇದ್ದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯ ಪತ್ತೆಗಾಗಿ ಸಿಸಿಟಿವಿ ಫೂಟೇಜ್ ಪರಿಶೀಲಿಸಲಾಗುತ್ತಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸ್ ವಕ್ತಾರ ಬಿಲ್ ಡೂಲೈ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next