ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಮುಂಬೈನ ಬೊರಿವಲಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ತೆರಳಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಾನು ಸೇನೆಗೆ ಸೇರಲು ಬಯಸಿದ್ದೆ ಆದರೆ ಸಾಧ್ಯವಾಗಲಿಲ್ಲ: ರಕ್ಷಣಾ ಸಚಿವ ಸಿಂಗ್
ಈವರೆಗೂ ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಮೂಲಗಳ ಪ್ರಕಾರ, ಬೊರಿವಲಿ ಸಾಯಿಬಾಬಾ ನಗರದ ಸಾಯಿಬಾಬಾ ದೇವಸ್ಥಾನದ ಸಮೀಪದಲ್ಲಿದ್ದ ಗೀತಾಂಜಲಿ ಕಟ್ಟಡ ಕುಸಿದು ಬಿದ್ದಿರುವುದಾಗಿ ವಿವರಿಸಿದೆ. ಇದು ಶಿಥಿಲಗೊಂಡಿರುವ ಕಟ್ಟಡ ಎಂದು ಬಿಎಂಸಿ ಘೋಷಿಸಿತ್ತು.
ಶಿಥಿಲಗೊಂಡ ಕಟ್ಟಡ ಎಂದು ಘೋಷಿಸಿದ ನಂತರ ವಾಸವಾಗಿದ್ದವರು ಬೇರೆಡೆ ಸ್ಥಳಾಂತರಗೊಂಡಿದ್ದರು. ಆದರೂ ಕೆಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.