Advertisement

ಶಾಲಾ ಮಿನಿ ವ್ಯಾನ್ ಗೆ ಬೆಂಕಿ ಹೊತ್ತಿಕೊಂಡು ನಾಲ್ವರು ಮಕ್ಕಳು ಜೀವಂತ ದಹನ

09:51 AM Feb 16, 2020 | Nagendra Trasi |

ನವದೆಹಲಿ: ಶಾಲಾ ವ್ಯಾನ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಮಕ್ಕಳು ಜೀವಂತವಾಗಿ ದಹನವಾಗಿರುವ ಘಟನೆ ಪಂಜಾಬ್ ನ ಸಾಂಗ್ರೂರ್ ಎಂಬಲ್ಲಿ ಶನಿವಾರ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಮಿನಿ ವ್ಯಾನ್ ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದ ಸ್ಥಳೀಯ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರು ಸ್ಥಳಕ್ಕೆ ಆಗಮಿಸಿ ಉಳಿದ ಎಂಟು ಮಕ್ಕಳನ್ನು ರಕ್ಷಿಸಿದ್ದರು. ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಾಂಗ್ರೂರ್ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ. ತನಿಖೆ ನಡೆಸಲು ಆದೇಶ ನೀಡಿರುವುದಾಗಿ ಸಿಂಗ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next