ಈ ಎನ್‌ಕೌಂಟರ್ ವೇಳೆ ಮೂವರು ಯೋಧರು ಹಾಗೂ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಪುಲ್ವಾಮಾದ ಲಸ್ಸಿಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಗ್ಗೆ ಸೇನಾ ಪಡೆ ದಾಳಿ ನಡೆಸಿತ್ತು.
Advertisement
ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದ್ದು, ಆ ಉಗ್ರರ ಶವಗಳನ್ನು ಸೇನೆ ವಶಪಡಿಸಿಕೊಂಡಿದೆ. ಗಾಯಗೊಂಡ ಯೋಧರು ಹಾಗೂ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.