Advertisement

ನಾಲ್ಕು ವರ್ಷದ ಪದವಿ ವ್ಯಾಸಂಗ ಸದ್ಯ ಬೇಡ : ವಿದ್ಯಾರ್ಥಿ ಸಂಘಟನೆಗಳು

09:51 PM Jul 06, 2021 | Team Udayavani |

ಬೆಂಗಳೂರು : ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಭಾಗವಾಗಿ, ಪದವಿ ವ್ಯಾಸಂಗವನ್ನು ಮೂರು ವರ್ಷದಿಂದ ನಾಲ್ಕು ವರ್ಷಕ್ಕೆ ವಿಸ್ತರಿಸಿರುವುದನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಎಐಎಸ್‌ಎಫ್, ಎಸ್‌ಎಫ್ಐ, ಎಐಡಿಎಸ್‌ಒ, ಕೆವಿಎಸ್‌ ಮೊದಲಾದ ಎಡ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

Advertisement

ಮೂರು ವರ್ಷಗಳ ಪದವಿ ವ್ಯಾಸಂಗದ ಸಂದರ್ಭದಲ್ಲಿದ್ದ ನಾಲ್ಕು ಸೆಮಿಸ್ಟ್‌ಗಳ ಕನ್ನಡ ಭಾಷಾ ವ್ಯಾಸಂಗವನ್ನು ಎರಡು ಸೆಮಿಸ್ಟರ್‌ಗಳಿಗೆ ಮೊಟಕುಗೊಳಿಸಲಾಗಿದೆ. ರಾಜ್ಯ ಸರ್ಕಾರದ ಈ ಎರಡು ಕ್ರಮಗಳು ವಿದ್ಯಾರ್ಥಿಗಳ ಹಾಗೂ ಕನ್ನಡ ವಿರೋಧಿ ಮತ್ತು ರಾಜ್ಯದ ಅಭಿವೃದ್ದಿ ವಿರೋಧಿಯಾಗಿದೆ. ಸರ್ಕಾರ ತಕ್ಷಣವೇ ಈ ಎರಡು ಕ್ರಮಗಳನ್ನು ವಾಪಾಸು ಪಡೆಯುವಂತೆ ಎಡ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ವಾಸುದೇವ ರೆಡ್ಡಿ ಹಾಗೂ ರಮೇಶ್‌ ನಾಯಕ್‌ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ :ಅಮರ ವೀರಯೋಧ ಕಾಶಿರಾಯ ತ್ಯಾಗ ಯುವಕರಿಗೆ ಆದರ್ಶ : ಶಿವಾನಂದ ಪಾಟೀಲ

ಪ‌ದವಿ ವ್ಯಾಸಂಗವನ್ನು ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದರಿಂದ ನಿರುದ್ಯೋಗ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಹಾಗೂ ಪಾಲಕ, ಪೋಷಕರು ಮತ್ತೂಂದು ವರ್ಷದ ವ್ಯಾಸಂಗಕ್ಕೆ ದುಬಾರಿ ಶುಲ್ಕ ಕಟ್ಟಬೇಕಾಗುತ್ತದೆ.
ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿ ಹೆಚ್ಚಲಿದೆ. ಹಾಗೆಯೇ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಕಲಿಯುವ ಅವಕಾಶವನ್ನು ನಾಲ್ಕು ಸೆಮಿಸ್ಟರ್‌ ಗಳ ಅವಧಿಗಳಿಂದ ಎರಡು ಸೆಮಿಸ್ಟರ್‌ ಗಳ ಅವಧಿಗೆ ಮೊಟಕು ಮಾಡಿರುವುದು ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಎರಡು ಅಂಶಗಳನ್ನು ಕೈಬಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next