Advertisement

Uttar Pradesh: ಹುಟ್ಟುಹಬ್ಬ ಮುಗಿಸಿ ಬರುವಾಗ ಅಪಘಾತ, ನಾಲ್ವರು ಯೂಟ್ಯೂಬರ್‌ಗಳ ದುರಂತ ಅಂತ್ಯ

10:27 AM Jun 10, 2024 | Team Udayavani |

ಉತ್ತರಪ್ರದೇಶ: ಹುಟ್ಟುಹಬ್ಬ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯೂಟ್ಯೂಬರ್‌ ಗಳು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

Advertisement

ಮೃತ ಯೂಟ್ಯೂಬರ್ ಗಳನ್ನು ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ.

ನಾಲ್ವರು ಯುವಕರು ಯೂಟ್ಯೂಬರ್ ಗಳಾಗಿದ್ದು ರೌಂಡ್ 2 ವರ್ಲ್ಡ್ ಚಾನೆಲ್‌ ನಲ್ಲಿ ಹಾಸ್ಯ ವಿಷಯವನ್ನು ರಚಿಸುತಿದ್ದರು ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳು ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಎರಡು ಕಾರಿನಲ್ಲಿದ್ದವರು ಗಾಯಗೊಂಡಿದ್ದು ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಕಾರಿನಲ್ಲಿದ್ದವರನ್ನು ಸಿಎಚ್‌ಸಿ ಗಜರೌಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಈ ವೇಳೆ ಪರಿಶೀಲಿಸಿದ ವೈದ್ಯರು ನಾಲ್ವರು ಯುವಕರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಅಪಘಾತದಲ್ಲಿ ಕೆಲವು ಮಂದಿ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಮ್ರೋಹಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: Team Modi: ನಿರ್ಮಲಾ ಸೀತಾರಾಮನ್ ಸೇರಿ ಮೋದಿ ಸಂಪುಟದಲ್ಲಿರುವ 7 ಮಹಿಳೆಯರ ವಿವರ ಇಲ್ಲಿದೆ

Advertisement

Udayavani is now on Telegram. Click here to join our channel and stay updated with the latest news.

Next