Advertisement

36 ಸಂತ್ರಸ್ತರಿಗೆ 40.46 ಲಕ್ಷ ರೂ. ಪರಿಹಾರ ವಿತರಣೆ

03:29 PM Dec 20, 2019 | Suhan S |

ವಿಜಯಪುರ: ದೌರ್ಜನ್ಯಕ್ಕೀಡಾದ ಪರಿಶಿಷ್ಟ ಜಾತಿ-ಪಂಗಡಗಳ 36 ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ 40.46 ಲಕ್ಷ ರೂ. ಪರಿಹಾರ ಧನ ವಿತರಿಸಲಾಗಿದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ ಅಧಿಕಾರಿಗಳು, 2019 ರ ಜ.1ರಿಂದ 30ರವರೆಗೆ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ 47 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು.1989 ರ ಪರಿಶಿಷ್ಟ ಜಾತಿ-ಪಂಗಡ ಕಾಯ್ದೆಯಡಿ 36 ನ್ಯಾಯಾಲಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈವರೆಗೆ ಇತ್ಯರ್ಥಗೊಂಡ 36 ಪ್ರಕರಣಗಳಲ್ಲಿ 40.46 ಲಕ್ಷ ರೂ. ಪರಿಹಾರ ಧನ ವಿತರಿಸಲಾಗಿದೆ. ಬಾಕಿಯಿರುವ 11 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ವಿತರಿಸಬೇಕಾಗಿದೆ. ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಅರ್ಹ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಸಾಧನ ಸಲಕರಣೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಒಡೆತನ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಬಸವನಬಾಗೇವಾಡಿ ಪಟ್ಟಣದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ವಿಷಯದಲ್ಲಿ ಸಂಬಂಧ ಪಟ್ಟಂತೆ ಬೇಡಿಕೆ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು. ಖಾದಿಮತ್ತು ಗ್ರಾಮೋದ್ಯೋಗ ಇಲಾಖೆಯಿಂದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಜನರಿಗೆ ಇರುವ ಯೋಜನೆಗಳ ಲಾಭ ದೊರಕಿಸುವ ಜತೆಗೆ ಜಾಗೃತಿ ಮೂಡಿಸಬೇಕು. ಸಿಂದಗಿ ಪಟ್ಟಣದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಮೀಸಲಿರುವ ನಿವೇಶನ ಹಂಚಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗೆದ್ದಲಮರಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ಸಮುದಾಯಕ್ಕೆ ಬಳಸುವ ಕುರಿತು ಪರಿಶೀಲಿಸಬೇಕು. ಸಿಂದಗಿ ತಾಲೂಕಿನ ಕಲ್ಲಹಳಿ ಗ್ರಾಮದಲ್ಲಿ ಅಂಬೇಡ್ಕರ ಭವನಕ್ಕೆ ಮೀಸಲಿಟ್ಟ ಅನುದಾನ ಅದೇ ಕಾಮಗಾರಿಗೆ ಬಳಸಬೇಕು. ವಿಜಯಪುರ ಪಟ್ಟಣದ ಇಂಡಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಜನಾಂಗಕ್ಕೆ ಮೀಸಲಿಟ್ಟ ಜಮೀನು ಬಗ್ಗೆ ಪರಿಶೀಲನೆ ನಡೆಸಬೇಕು. ಕೆಸರಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

Advertisement

ದೇವದಾಸಿ ಪದ್ದತಿ ನಿರ್ಮೂಲನೆಗಾಗಿ ಜಾಗೃತಿ ಮೂಡಿಸಬೇಕು. ಸ್ಮಶಾನ ಭೂಮಿ ಗುರುತಿಸುವುದು. ಗಂಗಾ ಕಲ್ಯಾಣ ಯೋಜನೆಗೆ ವಿದ್ಯುತ್‌ ಸಂಪರ್ಕಿಸಲು ಕ್ರಮಕೈಗೊಳ್ಳಬೇಕು. ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆ ಮುಂತಾದ ಕೆಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಉಪಸ್ಥಿತರಿದ್ದ ನಾಮ ನಿರ್ದೇಶಿತ ಸದಸ್ಯರು ಸಭೆಯ ಗಮನಕ್ಕೆ ತಂದರು. ಎಸ್ಪಿ ಪ್ರಕಾಶ ನಿಕ್ಕಂ, ಉಪವಿಭಾಗಾಧಿಕಾರಿ ಸ್ನೆಹಲ್‌, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಸಮಿತಿ

ನಾಮ ನಿರ್ದೇಶಿತ ಸದಸ್ಯ ಅಡಿವೆಪ್ಪ ಸಾಲಗಲ, ಅರವಿಂದ ಸಾಲವಾಡಗಿ, ಬಸವರಾಜ ಪೂಜಾರಿ, ರಾಜಶೇಖರ ಕೂಚಬಾಳ, ಮನೋಹರ ಕಾಂಬಳೆ, ಮತ್ತಣ್ಣ ಸಾಸನೂರ, ವಿನಾಯಕ ಗುಣಸಾಗೆ, ಅಶೋಕ ಕರಿಕಲ್‌, ಗಣಪತಿ ಬಾನೆಕೊಲ್‌ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next