ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಭಾರಿ ಲಾಭಗಳಿಸಬಹುದೆಂಬ ಮಿಷವೊಡ್ಡಿ ಲಕ್ಷಾಂತರ ರೂ.ವಂಚನೆ ಮಾಡಿದ ಪ್ರಕರಣದಲ್ಲಿ ಕೇರಳ ನಿವಾಸಿ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಕೇರಳ ಕೋಝಿಕ್ಕೋಡ್ ಪುಳಕ್ಕಲ್ ನಿವಾಸಿ ಜಯಂತ್ ಪಿ. (35) ಬಂಧಿತ ಆರೋಪಿ.
ದೂರುದಾರರಿಗೆ ಯಾರೋ ಅಪಚಿರಿತ ವ್ಯಕ್ತಿ ವಾಟ್ಸಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಲಿಂಕ್‌ನ್ನು ಕಳುಹಿಸಿದ್ದಾನೆ. ಬಳಿಕ ಹಂತ ಹಂತವಾಗಿ ಒಟ್ಟು 40,64,609ರೂ. ಹಣವನ್ನು ಪಡೆದು ವಂಚನೆ ಮಾಡಿದ್ದಾನೆ.
ಜಯಂತ್ ನ ಬ್ಯಾಂಕ್ ಖಾತೆಯ ಮೇಲೆ ದೇಶದ್ಯಾಂತ ಸುಮಾರು 90ಕ್ಕೂ ಹೆಚ್ಚಿನ ದೂರು ಇರುವುದು ತನಿಖೆಯ ವೇಳೆ ಕಂಡುಬಂದಿದೆ.
ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ಮಾರ್ಗದರ್ಶನದಂತೆ ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ನಿರೀಕ್ಷಕರಾದ ಸತೀಶ್ ಎಂ.ಪಿ. ಭಾಗವಹಿಸಿದ್ದಾರೆ.