Advertisement
ಪೌರಾಡಳಿತ ಇಲಾಖೆ, ಜಿಲ್ಲಾಡಳಿತ, ನಗರಸಭೆ ವತಿಯಿಂದ ನಡೆದ ನಗರಸಭೆ ಕಾರ್ಯಾಲಯದ ನೂತನ ಕಟ್ಟಡ ಉದ್ಘಾಟನೆ ಹಾಗೂ ನಗರಸಭೆ ಖಾಯಂ ಪೌರ ಕಾರ್ಮಿಕರಿಗೆ ವಸತಿ ಸಮುಚ್ಛಯ ನಿರ್ಮಾಣದ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಹೊರವಯದ ಕೈಗಾರಿಕಾ ಪ್ರದೇಶ, ಹೆಚ್ಚುತ್ತಿರುವ ಬಡಾವಣೆಗಳು, ಶಿಕ್ಷಣ ಸಂಸ್ಥೆಗಳಿಂದ ನಗರಕ್ಕೆ ಹೆಚ್ಚು ಮೂಲ ಸೌಕರ್ಯ ಬೇಕಿದ್ದು, ಪೌರಾಡಳಿತ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡಿದೆ ಎಂದರು.
Related Articles
Advertisement
ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲದು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್, ನಗರಸಭೆ ಕಾರ್ಯಾಲಯದ ಉದ್ಘಾಟನೆಗೆ ಹಿಂದೆ ನಮ್ಮ ಕಲ್ಪನೆಗೂ ಮೀರಿ ಮುಖ್ಯಮಂತ್ರಿಗಳ ಸಭೆ ಇದ್ದುದರಿಂದ ಅನಿವಾರ್ಯವಾಗಿ ಬರಲು ಆಗಲಿಲ್ಲ. ಆದರೆ, ವಿಪಕ್ಷದವರು ಇದನ್ನೇ ದೊಡ್ಡದು ಮಾಡಿ ಪ್ರತಿಭಟನೆ ಮಾಡುವ ಮೂಲಕ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. 2014ರಲ್ಲಿ ದೊಡ್ಡಬಳ್ಳಾಪುರ ನಗರಕ್ಕೆ ಜಕ್ಕಲ ಮಡುಗು ನೀರು ಹರಿಸುವ ವೇಳೆ ಚಿಕ್ಕಬಳ್ಳಾಪುರ ದಿಂದ ವಿರೋಧ ವ್ಯಕ್ತವಾದಾಗ ಕುಡಿಯುವ ನೀರಿನಲ್ಲಿ ರಾಜಕೀಯ ಮಾಡುವುದು ಬೇಡ ಎಂದು ನೀರಿನ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲಾಗಿತ್ತು. ಕೋವಿಡ್ ಲಸಿಕೆಗೂ ವಿರೋಧ ಪಕ್ಷದವವರು ಟೀಕಿಸಿದ್ದರು. ಬಡ ರಾಷ್ಟ್ರಗಳಿಗೆ ಲಸಿಕೆ, ನೀರು, ಆಹಾರದ ನೆರವನ್ನು ನೀಡಿ, ಭಾರತೀಯ ಸಂಸ್ಕೃತಿ ತೋರಿಸಿದ್ದೇವೆ ಎಂದರು. ಅನುದಾನ ಬಿಡುಗಡೆಗೆ ಮನವಿ: ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಮಾತನಾಡಿ, ಬೆಳೆಯುತ್ತಿರುವ ನಗರಕ್ಕೆ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ಎ ದರ್ಜೆ ನಗರಸಭೆಯನ್ನಾಗಿ ಘೋಷಿಸಬೇಕು. ನಗರದ ವಿವಿಧ ಮೂಲ ಸೌಕರ್ಯಾಭಿವೃದ್ಧಿ, ರಸ್ತೆ ಅಗಲೀಕರಣ, ವಿದ್ಯುತ್ ಚಿತಾಗಾರ, ಈಜುಕೊಳ, ನೇಕಾರ ಭವನ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ 97 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ುನವಿ ಸಲ್ಲಿಸಿದರು. ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಐದು ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಕೆ.ರೇವಣಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ದೊಡ್ಡಬಳ್ಳಾ ಪುರ ನಗರಸಭೆ ಉಪಾಧ್ಯಕ್ಷೆ ಫರ್ಹಾನಾ ತಾಜ್, ಪೌರಾಯುಕ್ತ ಕೆ.ಜಿ.ಶಿವಶಂಕರ್ ಹಾಗೂ ಮತ್ತಿತರರು ಇದ್ದರು.