Advertisement

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

11:28 PM Jan 24, 2021 | Team Udayavani |

ಬೆಂಗಳೂರು: ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್‌ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ  ಒಂದೊಂದು ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸುವ ಬಗ್ಗೆ ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

4 ರಸಗೊಬ್ಬರ ಕಾರ್ಖಾನೆ ಪುನಶ್ಚೇತನಕ್ಕೆ 50 ಸಾ. ಕೋ. ರೂ. :

ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನ ಗೊಳಿಸಲಾಗುತ್ತಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತವನ್ನು ವ್ಯಯಿಸಲಾಗುತ್ತಿದೆ. ಈ ಪೈಕಿ ರಾಮಗುಂಡಮ್‌ ಸ್ಥಾವರದ ಕೆಲಸ ಬಹುತೇಕ ಮುಗಿದಿದ್ದು, ಯೂರಿಯಾ ಉತ್ಪಾದನೆಗೆ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next