Advertisement

 ಬಳ್ಳಾರಿಯಲ್ಲಿ ಗರಿಷ್ಠ 40 ಡಿ.ಸೆ. ತಾಪಮಾನ 

01:49 AM Mar 14, 2019 | |

ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಉತ್ತರ ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನೆಲ್ಲೆಡೆ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಹೆಚ್ಚೇನೂ ಬದಲಾವಣೆ ಕಂಡುಬಂದಿಲ್ಲ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಕನಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬರಲಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನ ಕೊಂಚ ಹೆಚ್ಚಾಗಿತ್ತು. ಬಳ್ಳಾರಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 40 ಡಿ. ಸೆ. ಮತ್ತು ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 15 ಡಿ. ಸೆ. ತಾಪಮಾನ ದಾಖಲಾಗಿದೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next