ಡಾಕಾರ್ : ದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್‌ನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ಮೃತರಾಗಿರುವ ಘಟನೆ ನಡೆಡಿದೆ.
Advertisement
ಕಾಫಿನ್ ಪ್ರಾಂತ್ಯದ ಗ್ನಿವಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಬಸ್ ಒಂದರ ಟೈರ್ ಪಂಕ್ಚರ್ ಆದ ಹಿನ್ನೆಲೆ ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ 40 ಮಂದಿ ಮೃತಪಟ್ಟಿದ್ದು, 78 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಅಧ್ಯಕ್ಷ ಮ್ಯಾಕಿ ಸಾಲ್ ಸಂತಾಪ ಸೂಚಿಸಿದ್ದು, ದೇಶದಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ.