Advertisement

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

10:44 PM Nov 17, 2024 | |

ಶಿವಮೊಗ್ಗ: “ಬಿಜೆಪಿ ಸರಕಾರದಲ್ಲಿ 40 ಪರ್ಸೆಂಟ್‌ ಕಮಿಷನ್‌’ ಎಂದು ಮಾಡಿದ್ದ ಆರೋಪ ಸುಳ್ಳು ಎಂದು ಸಾಬೀತಾಗಿದೆ. ಇನ್ನಾದರೂ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾಂಗ್ರೆಸಿಗರಿಗೆ ತಾಕೀತು ಮಾಡಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ನಿರಾಧಾರ ಆರೋಪ ಸರಿಯಲ್ಲ. ಇನ್ನಾದರೂ ಕಾಂಗ್ರೆಸ್‌ ಸುಳ್ಳು ಆರೋಪ ಮಾಡುವುದನ್ನು ಬಿಡಬೇಕು. ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡುವುದು ಒಳ್ಳೆಯದು. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಅನಗತ್ಯವಾಗಿ ವಿಳಂಬ ಮಾಡುತ್ತಿರು ವುದು ಸರಿಯಲ್ಲ. ಈ ಹಿಂದೆ ಇಷ್ಟೊಂದು ವಿಳಂಬ ಆಗಿರಲಿಲ್ಲ. ಬೇಗ ಚುನಾವಣೆ ನಡೆಸಬೇಕು. ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next