Advertisement

40% commission; ರಾಜ್ಯದಲ್ಲಿ ಮತ್ತೆ 40 ಪರ್ಸೆಂಟ್ ಪರಿಸ್ಥಿತಿ: ಕೆಂಪಣ್ಣ ಆರೋಪ

02:11 PM Feb 08, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಈ ಹಿಂದೆ ಶಾಸಕರೇ ನೇರವಾಗಿ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಂದಲೇ ಭ್ರಷ್ಟಾಚಾರ ರಾಜ್ಯದಲ್ಲಿ ಬೇರೂರಿದೆ. ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿ ಅಧಿಕಾರಿಯಾಗಳಿದ್ದಾರೆ ಎಂದರು.

ಬಿಬಿಎಂಪಿಯಲ್ಲಿ 15 ಮಂದಿ ಅಧಿಕಾರಿಗಳು ಭ್ರಷ್ಟರಿದ್ದಾರೆ‌. ಅಧಿಕಾರಿಗಳದ್ದೇ ಕಾರುಬಾರು ಆಗಿ ಹೋಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಡಿಸಿಎಂ ಅವರ ಗಮನಕ್ಕೆ ತರಲಾಗುವುದು ಎಂದರು.

ಮಾರ್ಚ್ 4 ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ‌. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಾಗುವುದು ಎಂದು ಕೆಂಪಣ್ಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next