Advertisement

Onion: ಬೆಲೆ ಏರಿಕೆ ತಡೆಯಲು ಈರುಳ್ಳಿ ರಫ್ತಿಗೆ ಶೇ.40 ತೆರಿಗೆ

10:50 PM Aug 19, 2023 | Team Udayavani |

ನವದೆಹಲಿ: ದೇಶದಲ್ಲಿ ಈರುಳ್ಳಿ ದರ ಏರಿಕೆಯಾಗದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇತರ ದೇಶಗಳಿಗೆ ರಫ್ತು ಮಾಡಲಾಗುವ ಈರುಳ್ಳಿಯ ಮೇಲೆ ಶೇ.40 ಸುಂಕ ವಿಧಿಸಿ ಆದೇಶ ಹೊರಡಿಸಿದೆ. ಡಿ.31ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಶನಿವಾರ ಪ್ರಕಟಿಸಿದೆ. ಇತ್ತೀಚೆಗಷ್ಟೇ ದೇಶಾದ್ಯಂತ ಮಾರುಕಟ್ಟೆಗಳಲ್ಲಿ ಪ್ರತಿ ಕೆಜಿ ಟೊಮಾಟೋಗೆ 200 ರೂ. ವರೆಗೆ ದರ ಏರಿಕೆ ಆಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

Advertisement

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಕೊರತೆಯಿಂದ ಈರುಳ್ಳಿ ಬಿತ್ತನೆಯಲ್ಲಿ ವಿಳಂಬ, ಉತ್ತರ ಭಾರತದ ರಾಜ್ಯಗಳಲ್ಲಿ ಧಾರಾಕಾರ ಮಳೆಯಿಂದ ಈರುಳ್ಳಿ ಬೆಳೆಯುವ ರಾಜ್ಯಗಳಲ್ಲಿ ಬೆಳೆ ನಷ್ಟ ಉಂಟಾಗಿದ್ದರಿಂದ ಮಾರುಕಟ್ಟೆಯಲ್ಲಿ ಅಭಾವ ಉಂಟಾಗಲಿದೆ. ಹೀಗಾಗಿ, ಪ್ರತಿ ಬೆಲೆ ಏರಿಕೆಯಾಗಲಿದೆ ಎಂದು ಕೆಲ ದಿನಗಳ ಹಿಂದೆ ಅಧ್ಯಯನ ವರದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next