Advertisement
“ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ) ಬಿಯಾಂಡ್ ಬೆಂಗಳೂರು’ ಉಪಕ್ರಮದ ನಿಮಿತ್ತ ಮಂಗಳವಾರ ನಗರದಲ್ಲಿ ಏರ್ಪ ಡಿಸಿದ್ದ ಸಿಇಒಗಳ ದುಂಡು ಮೇಜಿನ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯು ಉದ್ಯಮಶೀಲತೆ, ಶೈಕ್ಷಣಿಕ ಸಂಸ್ಕೃತಿ ಮತ್ತು ಹಿತಕರ ಹವಾ ಮಾನ ಮೂರಕ್ಕೂ ಹೆಸರಾಗಿದೆ. ಇಲ್ಲಿ ಉದ್ದಿಮೆಗಳನ್ನು ಸಮೃದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆಸಲಾಗುವುದು. ಪ್ರಧಾನಿ ಮೋದಿ ದೂರದೃಷ್ಟಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಘೋಷಿಸಿದ್ದು, ರಾಜ್ಯದಲ್ಲಿ ಇದು ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಜಾರಿಗೆ ಬರುತ್ತಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಮತ್ತು ಪದವಿ ಹಂತಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಅಳವಡಿಸಿಕೊಂಡಿದೆ ಎಂದರು.
Related Articles
ರಾಜ್ಯದಲ್ಲಿ ಸರಕಾರಿ ಎಂಜಿನಿ ಯರಿಂಗ್ ಮತ್ತು ಇವು ಇಲ್ಲದ ಕಡೆಗಳಲ್ಲಿ ಖಾಸಗಿ ಕಾಲೇಜುಗಳನ್ನು ವಿಶ್ವಮಟ್ಟಕ್ಕೆ ಸುಧಾರಿಸುವ “ಸೂಪರ್-30′ ಯೋಜನೆಯನ್ನು ರೂಪಿಸಲಾಗಿದೆ. ಇದರ ಜತೆಗೆ ಎಂಜಿನಿಯರಿಂಗ್ ಕಾಲೇಜುಗಳು ವಿಶ್ವದ ಯಾವುದೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಉದ್ದಿಮೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದನ್ನು ಉತ್ತೇಜಿಸಲಾಗುತ್ತಿದೆ. ಇದು ಸಮಾಜದಲ್ಲಿ ಪರಿವರ್ತನೆ ತರಲಿದ್ದು, ಜಾಗತಿಕ ಮಟ್ಟದ ನಾಯಕತ್ವವನ್ನು ಸೃಷ್ಟಿಸಲಿದೆ ಎಂದರು.
Advertisement
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ವಿದ್ಯುನ್ಮಾನ ಮತ್ತು ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.