Advertisement

ಬೆಳೆ ಹಾನಿ ಪರಿಹಾರಕ್ಕೆ 400 ಕೋಟಿ ಬಿಡುಗಡೆ

11:01 PM Dec 13, 2019 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರವಾಹಕ್ಕೆ ಹಾನಿಗೊಳಗಾದ ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಇನ್‌ಫ‌ುಟ್‌ ಸಬ್ಸಿಡಿ 400 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಯಿಂದ ಹಣ ಬಿಡುಗಡೆಗೆ ಆದೇಶ ನೀಡಲಾಗಿದ್ದು, ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗಳಿಗೆ ನೇರವಾಗಿ ಪರಿಹಾರ ಹಣ ವರ್ಗಾವಣೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Advertisement

ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ ಸುಮಾರು 8 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 3,891 ಕೋಟಿ ರೂ.ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1,200 ಕೋಟಿ ರೂ. ಬಿಡುಗಡೆ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next