ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿದ್ದ 30,606 ಅತಿಥಿ ಶಿಕ್ಷಕರ ಪೈಕಿ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಸದ್ಯದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು.
ಶೇ.70ರಷ್ಟು ಪಠ್ಯಪುಸ್ತಕ ಪೂರೈಕೆ :
ಪಠ್ಯಪುಸ್ತಕ ವಿವಾದದ ನಡುವೆಯೂ ರಾಜ್ಯದಲ್ಲಿ ಶೇ.70 ಪುಸ್ತಕ ಶಾಲೆಗಳಿಗೆ ಪೂರೈಕೆಯಾಗಿದ್ದು, ಉಳಿದ ವುಗಳನ್ನು ಸಾಧ್ಯವಾದಷ್ಟು ಬೇಗ ತಲುಪಿಸಲಾಗುವುದು. ಈ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್. ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಪಲ್ಲವಿ ಅಕುರಾತಿ ಉಪಸ್ಥಿತರಿದ್ದರು.