Advertisement
ಪ್ರಸಕ್ತ ಬಜೆಟ್ನಲ್ಲಿ ಕೇಂದ್ರ ಸರಕಾರದಿಂದ 6,855ಕೋಟಿ ರೂ. ಹಾಗೂ ಮುಕ್ತ ಮಾರುಕಟ್ಟೆಯಿಂದ 96,840 ಕೋ.ರೂ. ಸೇರಿ ಒಟ್ಟು 1.05 ಲಕ್ಷ ಕೋ.ರೂ.ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ, ಸೆಪ್ಟಂಬರ್ ವರೆಗೆ 4 ಸಾವಿರ ಕೋ.ರೂ. ಸಾರ್ವಜನಿಕ ಸಾಲ ಮಾಡಿರುವುದಲ್ಲದೆ ಮುಕ್ತ ಮಾರುಕಟ್ಟೆ ಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು.
ಈಗಾಗಲೇ ವಾರ್ಷಿಕ ಬಡ್ಡಿ ರೂಪದಲ್ಲಿ 40 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಪಾವತಿಸುತ್ತಿರುವ ಸನಕಾರ, ನೌಕರರ ವೇತನ ಪರಿಷ್ಕರಣೆ, ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ಬದ್ಧತಾ ವೆಚ್ಚಗಳ ಭಾರವನ್ನೂ ಹೊತ್ತಿದೆ.
Related Articles
ಶೇ. 2.95ರಷ್ಟಿರುವ ವಿತ್ತೀಯ ಕೊರತೆ
ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರ ಅನ್ವಯ ವಿತ್ತೀಯ ಕೊರತೆಯು ಜಿಎಸ್ಡಿಪಿಯ ಶೇ. 3ರೊಳಗೆ ಇರಬೇಕು. ಅಂತೆಯೇ ಸಾಲದ ಪ್ರಮಾಣವು ಶೇ. 25ರೊಳಗೆ ಇರಬೇಕು. ಪ್ರಸ್ತುತ ವಿತ್ತೀಯ ಕೊರತೆಯು ಜಿಎಸ್ಡಿಪಿಯ ಶೇ. 2.95ರಷ್ಟಿದ್ದು, ಸಾಲದ ಪ್ರಮಾಣವು ಶೇ. 23.68ಕ್ಕೆ ತಲುಪಿದೆ. ಬದ್ಧತಾ ವೆಚ್ಚದ ಜತೆಗೆ ಸಾಲ ಮರುಪಾವತಿಯತ್ತಲೂ ಸರಕಾರ ಗಮನ ಹರಿಸದಿದ್ದರೆ, ಸಾರ್ವಜನಿಕ ಆಸ್ತಿ ನಗದೀಕರಣ, ಸಬ್ಸಿಡಿಗಳ ಕಡಿತದಂತಹ ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾದ ಅನಿವಾರ್ಯ ಸಹ ಎದುರಾಗಬಹುದು ಎಂದು ಮಧ್ಯಮಾವಧಿ ವಿತ್ತೀಯ ಯೋಜನೆ ಸಹ ಎಚ್ಚರಿಸಿತ್ತು.
Advertisement
ಎಷ್ಟು ಸಾಲ?-ನವೆಂಬರ್, ಡಿಸೆಂಬರ್ನಲ್ಲಿ ತಲಾ
20 ಸಾವಿರ ಕೋಟಿ ರೂ. ಸಾಲ
-1.05 ಲಕ್ಷ ಕೋಟಿ ರೂ. ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ
-ಸೆಪ್ಟಂಬರ್ ವರೆಗೆ 4 ಸಾವಿರ ಕೋಟಿ ರೂ. ಸಾರ್ವಜನಿಕ ಸಾಲ
-ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿದ್ದ ಸರಕಾರ