ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಂಗಳವಾರ 409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 15 ಸಾವಿರದ ಗಡಿದಾಟಿದೆ.
Advertisement
ಜಿಲ್ಲೆಯಲ್ಲಿಂದು 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಾವಿನ ಸಂಖ್ಯೆ 179ಕ್ಕೆ ಏರಿಕೆಯಾಗಿದೆ.
ಗಣಿನಾಡಿನಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 15072ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 500 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 9452 ಜನರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 5431 ಸಕ್ರಿಯ ಪ್ರಕರಣಗಳಾಗಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.