ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 413ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಅನಾರೋಗ್ಯ ಬಳಲುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮರಣ ಹಾಗೂ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿದೆ.
ಮರಣ ಪ್ರಮಾಣ ಶೇ.0.82 ರಿಂದ ಶೇ. 0.96ಕ್ಕೆ ಹಾಗೂ ಪಾಸಿಟಿವ್ ಶೇ.0.34ರಿಂದ ಶೇ.0.39 ಏರಿಕೆಯಾಗಿದ್ದು, ಬೆಂಗಳೂರು 212, ಮೈಸೂರು 45, ಶಿವಮೊಗ್ಗ 33, ಉಡುಪಿ 19, ಧಾರವಾಡ 18, ದ.ಕ.10, ಹಾಸನ ಜಿಲ್ಲೆಯಲ್ಲಿ 11 ಪ್ರಕರಣಗಳು ದಾಖಲಾಗಿವೆ.
ಉಳಿದಂತೆ ಯಾದಗಿರಿ, ವಿಜಯಪುರ, ರಾಮನಗರ, ರಾಯಚೂರು, ಕೊಪ್ಪಳ, ಕೋಲಾರ, ಕೊಡಗು, ಬೀದರ್, ಬಾಗಲಕೋಟೆ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ, ಬೆಳಗಾವಿ, ಹಾವೇರಿ ಬೆಂ. ಗ್ರಾ., ಮಂಡ್ಯ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬೆರಳೆಣಿಕೆ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ:ತಂತ್ರಜ್ಞಾನ ಅಳವಡಿಕೆಯಲ್ಲಿ ನಾವು ದ್ವಿತೀಯ: ಪ್ರಧಾನಿ ಮೋದಿ
ಬೆಂಗಳೂರು ನಗರ 2 ಹಾಗೂ ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂತ ಒಟ್ಟು 6896 ಸಕ್ರಿಯ ಪ್ರಕರಣಗಳಿವೆ. 256 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.