Advertisement
ಹೀಗೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುತೂಹಲಕಾರಿ ಅಂಶವನ್ನು ಗುರುವಾರ ಬಹಿರಂಗಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೆಲವು ತಿಂಗಳುಗಳಲ್ಲೇ ಪತನಗೊಳ್ಳಲಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನಡುವೆಯೇ ಬಿಜೆಪಿಯ ತಂಡ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡುತ್ತಿದೆ ಎಂಬ ಉಪಮುಖ್ಯಮಂತ್ರಿಯವರ ಹೇಳಿಕೆಯೂ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚಿಸಿದ್ದಾರೆ. ಆ 42ಕ್ಕೂ ಹೆಚ್ಚು ಹೆಸರುಗಳನ್ನು ಈಗ ಬಹಿರಂಗಪಡಿಸುವುದಿಲ್ಲ. ಸ್ಥಳೀಯ ನಾಯಕರ ಜತೆ ಚರ್ಚಿಸಿ ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿಕೆಶಿ ಹೇಳಿದರು.
Related Articles
Advertisement