Advertisement
ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಘಟಿಕೋತ್ಸವದ ಕುರಿತು ವಿವರಣೆ ನೀಡಿದ ಅವರು, ಘಟಿಕೋತ್ಸದಲ್ಲಿ ರಾಷ್ಟ್ರೀಯ ಮೌಲಿಕರಣ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಪ್ರೊ.ಧೀರೇಂದ್ರಪಾಲ್ ಸಿಂಗ್ ಅತಿಥಿಯಾಗಿ ಭಾಗವಹಿಸಲಿ ದ್ದಾರೆ. ಅಲ್ಲದೆ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಬಡವರಾಜ ರಾಯ ರೆಡ್ಡಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
Related Articles
ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಎ ಕನ್ನಡ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುವ ವಿದ್ಯಾರ್ಥಿನಿ ಎಸ್.ಕೆ.ಸೌಜನ್ಯ ಒಟ್ಟು 8 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಇದರೊಂದಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಚಿನ್ನದ ಪದಕ ಪಡೆಯುತ್ತಿರುವ “ಚಿನ್ನದ ಹುಡುಗಿ’ ಎನಿಸಿಕೊಳ್ಳುತ್ತಿದ್ದಾರೆ.
Advertisement
ಹೊಸಕೋಟೆ ತಾಲೂಕಿನ ಕೇಸತ್ಯವಾರ ದವರಾದ ಸೌಜನ್ಯ ಎಸ್ಸೆಸ್ಸೆಲ್ಸಿಯಲ್ಲೇ ತಂದೆ ಯನ್ನು ಕಳೆದುಕೊಂಡರೂ ತಾಯಿಯ ಶ್ರಮ ಹಾಗೂ ಪ್ರೋತ್ಸಾಹದಿಂದ ಉನ್ನತ ಶಿಕ್ಷಣದ ಮೆಟ್ಟಿಲೇರಿ ಉತ್ತಮ ಸಾಧನೆ ಮಾಡಿದ್ದಾರೆ. 8 ಚಿನ್ನದ ಪದಕ ಪಡೆಯುತ್ತಿರುವ ಸಾಧನೆ ಬಗ್ಗೆ “ಉದಯವಾಣಿ’ಯೊಂದಿಗೆ ಸಂತಸ ಹಂಚಿಕೊಂಡ ಅವರು, “ತುಂಬಾ ಖುಷಿಯಾಗುತ್ತಿದೆ. ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆತ್ತಿದೆ. ಇದೆಲ್ಲವೂ ನನ್ನ ತಾಯಿ ಸುನಂದಮ್ಮನ ಶ್ರಮ ಮತ್ತು ಸಹಕಾರದಿಂದ ಸಾಧ್ಯವಾದದ್ದು,” ಎಂದು ಹೇಳಿದರು.
“ನಮ್ಮದು ಬಡ ಕುಟುಂಬ, ನಾನು ಎಸ್ಸೆಸ್ಸೆಲ್ಸಿ ಓದುತ್ತಿರುವಾಗಲೇ ತಂದೆಯನ್ನು ಕಳೆದುಕೊಂಡೆ. ನಂತರ ದಿನಗೂಲಿ ಮಾಡಿಕೊಂಡೇ ಸಂಸಾರ ನಿಬಾಯಿಸಿದ ತಾಯಿ ನನ್ನ ವಿದ್ಯಾಭ್ಯಾಸಕ್ಕೆ ಎಲ್ಲ ರೀತಿಯಲ್ಲೂ ನೆರವಾದರು. ಸರ್ಕಾರಿ ಶಾಲೆ, ಕಾಲೇಜುಗಳಲ್ಲೇ ಓದು ಮುಂದುವರಿಸಿದೆ. ಅಣ್ಣ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆಗಿದ್ದಾನೆ. ಮುಂದೆ ಪಿಎಚ್‌ಡಿ ಮಾಡುತ್ತೇನೆ. ಐಎಎಸ್ ಮಾಡುವುದು ನನ್ನ ಗುರಿ. ಬೋಧನಾ ಕ್ಷೇತ್ರ ನನ್ನ ಎರಡನೇ ಆಯ್ಕೆ,” ಎಂದು ಸೌಜನ್ಯ ಹೇಳಿದರು.
ಅದೇ ರೀತಿ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ರ್‍ಯಾಂಕ್ ವಿದ್ಯಾರ್ಥಿ ನಾಗರಾಜ 6 ಚಿನ್ನದ ಪದಕ ಪಡೆಯುವ ಮೂಲಕ 2ನೇ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿ ಎನಿಸಿದ್ದಾರೆ. ನಾಗರಾಜ್ 5 ವಿವಿಧ ನಗದು ಬಹುಮಾನಗಳನ್ನೂ ತಮ್ಮದಾಗಿಸಿಕೊಂಡಿದ್ದಾರೆ.