ಬೆಂಗಳೂರು: ರಾಜ್ಯದೆಲ್ಲೆಡೆ ಕಾವೇರಿ ನೀರು ವಿಚಾರವಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ, ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 44 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಬೇರೆ ರಾಜ್ಯ ಹಾಗೂ ದೇಶಗಳಿಂದ ಬೆಂಗಳೂರಿಗೆ ಬರಬೇಕಾಗಿದ್ದ ಸುಮಾರು ೨೨ ವಿಮಾನಗಳು ರದ್ದು ಗೊಂಡಿದ್ದು ಅದರಂತೆ ಬೆಂಗಳೂರಿನಿಂದ ಹಾರಾಟ ನಡೆಸಬೇಕಿದ್ದ ಸುಮಾರು ೨೨ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಯಾಣಿಕರು ತಮ್ಮ ಪ್ರಯಾಣದ ಟಿಕೆಟ್ ರದ್ದು ಪಡಿಸಿದ ಹಿನ್ನೆಲೆಯಲ್ಲಿ ವಿಮಾನ ರದ್ದುಗೊಂಡಿರುವುದಾಗಿ ಹೇಳಲಾಗಿದೆ.
ಈ ವೇಳೆ ಪ್ರತಿಭಟನೆ ನಡೆಸಲು ಕರ್ನಾಟಕ ಧ್ವಜದೊಂದಿಗೆ ವಿಮಾನ ನಿಲ್ದಾಣದ ಆವರಣವನ್ನು ಪ್ರವೇಶಿಸಿದ ಐವರು ಕನ್ನಡ ಪರ ಹೋರಾಟಗಾರರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಬಂಧಿತ ಐವರು ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶ ಪಡೆಯುವ ಸಲುವಾಗಿ ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ