ಬಂಟ್ವಾಳ: ಉಡುಪಿ – ಕಾಸರಗೋಡು 440 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಸಂಬಂಧಿಸಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಜಮೀನಿನ ಸರ್ವೇಗೆ 69 ಅರ್ಜಿದಾರರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅದರಂತೆ ಅರ್ಜಿದಾರರ ಸಮ್ಮುಖದಲ್ಲಿ ತಹಶೀಲ್ದಾರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಭೂ ದಾಖಲೆಗಳ ಉಪ ನಿರ್ದೇಶಕರು ಹಾಗೂ ತಂಡ ಸರ್ವೇ ನಡೆಸಲು ಹೈಕೋರ್ಟ್ ಆದೇಶಿಸಿದೆ.
Advertisement
ಈ ವೇಳೆ ಯಾವುದೇ ವ್ಯಕ್ತಿ, ಸಂಘ-ಸಂಸ್ಥೆ, ಸಂಘಟನೆಗಳು ಅಡಚಣೆ ಮಾಡದೆ ಸಹಕಾರ ನೀಡಬೇಕು. ಅಡಚಣೆ ಮಾಡಿದರೆ ಅದು ನ್ಯಾಯಾಲಯದ ಆದೇಶಎ ಉಲ್ಲಂಘನೆಯಾಗಲಿದೆ ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.