Advertisement

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

09:25 PM Jan 04, 2025 | Team Udayavani |

ಕಾಪು: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಗ್ರಾಹಕರಾದ ರಿಯಾನತ್‌ ಬಾನು ಹಾಗೂ ಆಕೆಯ ಪತಿ ನೂಮನ್‌ ಇಸ್ಮಾಯಿಲ್‌ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು. ಅವರಿಗೆ ದಿನೇಶ್‌ ಮತ್ತು ರಾಜೇಶ್‌ ಜಾಮೀನುದಾರರಾಗಿದ್ದರು. ಸಾಲ ಪಡೆದ ಆರೋಪಿಗಳು ಮೂರು ತಿಂಗಳ ಮಾಸಿಕ ಕಂತನ್ನು ಸಂಘಕ್ಕೆ ಪಾವತಿಸಿದ್ದು ಅನಂತರದ ಕಂತನ್ನು ಪಾವತಿ ಮಾಡದೇ ಬಾಕಿಯಿರಿಸಿಕೊಂಡಿದ್ದರು.

ಸಂಘದವರಿಗೆ ಆರೋಪಿಗಳ ಮೇಲೆ ಅನುಮಾನ ಬಂದು ಅವರು ನೀಡಿರುವ ದಾಖಲೆಗಳನ್ನು ಸಂಬಂಧಪಟ್ಟ ಸರಕಾರಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದಾಗ, ಆರೋಪಿಗಳು ಸಾಲ ತೆಗೆದುಕೊಳ್ಳುವ ಉದ್ದೇಶಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸಂಘದ ಶಾಖಾ ಪ್ರಧಾನ ವ್ಯವಸ್ಥಾಪಕ ಮೊದಿನ್‌ ಡಿ ಖಾನ್‌ ನೀಡಿದ ದೂರಿನಂತೆ ನಾಲ್ಕು ಮಂದಿ ಆರೋಪಿಗಳ ಮೇಲೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next