Advertisement

2ನೇ ಹಂತ: 45 ನಾಮಪತ್ರ ಸಲ್ಲಿಕೆ

12:08 AM Apr 02, 2019 | Sriram |

ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಮವಾರ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Advertisement

ನಾಮಪತ್ರ ಸಲ್ಲಿಕೆ ಆರಂಭವಾದ ಮಾ.28ರಿಂದ ಇಲ್ಲಿತನಕ ಒಟ್ಟು 72 ಅಭ್ಯರ್ಥಿಗಳು 98 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಏ.4 ಕೊನೆ ದಿನವಾಗಿದ್ದು, ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಏ.8 ಕೊನೆ ದಿನಾಂಕವಾಗಿದೆ.

ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ವೀಣಾ ಕಾಶಪ್ಪನವರ್‌, ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ್‌, ರಾಯಚೂರು ಕ್ಷೇತ್ರದಿಂದ ಬಿಜೆಪಿಯ ರಾಜಾ ಅಮರೇಶ್ವರ ನಾಯಕ್‌, ಕೊಪ್ಪಳದಿಂದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌, ಬಳ್ಳಾರಿಯಿಂದ ಬಿಜೆಪಿಯ ವೈ. ದೇವೇಂದ್ರಪ್ಪ, ದಾವಣೆಗೆರೆಯಿಂದ ಬಿಜೆಪಿಯಿಂದ ಜಿ.ಎಂ. ಸಿದ್ದೇಶ್ವರ್‌, ಜಿ.ಎಸ್‌. ಗಾಯಿತ್ರಿ ಸೋಮವಾರ ನಾಮಪತ್ರ ಸಲ್ಲಿಸಿದ ಪ್ರಮುಖರು.

Advertisement

Udayavani is now on Telegram. Click here to join our channel and stay updated with the latest news.

Next