ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 45 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ನಡುವೆ 11 ಮಂದಿ ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಒಟ್ಟು ಪ್ರಕರಣಗಳ ಸಂಖ್ಯೆ 669ಕ್ಕೇರಿದೆ. ಇದರಲ್ಲಿ 245 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಒಟ್ಟು 679 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 632 ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 22,436 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೋವಿಡ್‌ನಿಂದ ಇದುವರೆಗೆ ಜಿಲ್ಲೆಯಲ್ಲಿ 6 ಮಂದಿ ಮೃತರಾಗಿದ್ದಾರೆ.
ಇಂದು ವರದಿಯಾಗಿರುವ ಪ್ರಕರಣಗಳಲ್ಲಿ, ಕೊಳ್ಳೇಗಾಲ ತಾಲೂಕಿನಿಂದ 15, ಯಳಂದೂರು 11, ಚಾಮರಾಜನಗರ 10, ಗುಂಡ್ಲುಪೇಟೆ ತಾಲೂಕಿನ 7 ಹಾಗೂ ಹನೂರು ತಾಲೂಕಿನಿಂದ 1 ಪ್ರಕರಣ ವರದಿಯಾಗಿದೆ.