Advertisement

ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಶೇ.45 ಪ್ರಗತಿ

12:57 PM Oct 04, 2019 | Team Udayavani |

ಧಾರವಾಡ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ವೈಯಕ್ತಿಕ ಹಾಗೂ ಸಾಮುದಾಯಿಕ ಅಭಿವೃದ್ಧಿಗೆ ಉಪಯೋಜನೆಯಡಿ ಮೀಸಲಾಗಿರುವ ಅನುದಾನವನ್ನು ಕಾರಣ ಹೇಳದೆ ನಿಗದಿತ ಅವಧಿಯಲ್ಲಿ ಫಲಾನುಭವಿಗಳ ಆಯ್ಕೆ ಮತ್ತು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ 2019-20ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿನ ಆಗಸ್ಟ್‌-2019ರ ವರೆಗೆ ಆಗಿರುವ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವು ಇಲಾಖೆಗಳು ನಿಗದಿತ ಅವಧಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಪೂರ್ಣ ಗುರಿ ಸಾಧಿಸಿವೆ. ಆದರೆ ಉಳಿದ ಇಲಾಖೆಗಳು ಪ್ರಗತಿ ಸಾಧಿಸುವಲ್ಲಿ ಹಿಂದುಳಿದಿವೆ. ಎಸ್‌ಸಿಪಿ ಮತ್ತು ಟಿಎಸ್‌ಪಿ ಉಪಯೋಜನೆ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು ಮತ್ತು ಕಾಮಗಾರಿಗಳನ್ನು ಜಿಯೋ ಟ್ಯಾಗ್‌ ಮಾಡಿ ಛಾಯಾಚಿತ್ರದೊಂದಿಗೆ ನೋಡಲ್‌ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಗೆ ತಪ್ಪದೆ ಸಲ್ಲಿಸಬೇಕು ಎಂದು ಸೂಚಿಸಿದರು.

ವ್ಯಕ್ತಿಗತ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮತ್ತು ಆಯ್ಕೆಯಾದವರಿಗೆ ಆದೇಶ ಪತ್ರದ ಹಂಚಿಕೆ ಬಾಕಿ ಉಳಿದಿದೆ. ಇಲಾಖಾ ಅಧಿಕಾರಿಗಳು ಖುದ್ದು ಮುತುವರ್ಜಿ ವಹಿಸಿ, ಶಾಸಕರ ಅಧ್ಯಕ್ಷತೆಯ ಸಭೆ ಸಂಯೋಜಿಸಿ, ಫಲಾನುಭವಿಗಳ ಆಯ್ಕೆ ಪಟ್ಟಿಗೆ ಅನುಮೊದನೆ ಪಡೆಯಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗೊಳಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರಿ ಮಾತನಾಡಿ, ಎಸ್‌ ಸಿಪಿ ಮತ್ತು ಟಿಎಸ್‌ಪಿ ಉಪಯೋಜನೆಯಡಿ ಕಾರ್ಯಕ್ರಮಗಳಿಗಾಗಿ ಕೇಂದ್ರ ವಲಯ ಮತ್ತು ರಾಜ್ಯ ವಲಯ ಸೇರಿ ಜಿಲ್ಲೆಗೆ ಒಟ್ಟು 20578.63 ಲಕ್ಷ ರೂ. ಆರ್ಥಿಕ ಗುರಿ ಹೊಂದಲಾಗಿತ್ತು. ಆಗಸ್ಟ್‌ ಮಾಸಾಂತ್ಯದವರೆಗೆ 10102.84 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಶೇ.45 ಪ್ರಗತಿ ಸಾ ಧಿಸಲಾಗಿದೆ. ಉಪಯೋಜನೆಯಡಿ ಕೈಗೊಳ್ಳುವ ಕಾರ್ಯಕ್ರಮಗಳ ಪ್ರಗತಿ ಕುರಿತು ಛಾಯಾಚಿತ್ರಗಳೊಂದಿಗೆ ವಿವರವಾದ ವರದಿಯನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಿದರು.

Advertisement

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ ಮಾತನಾಡಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಉಪಯೋಜನೆಯಡಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿಗದಿತ ಗುರಿಯನ್ವಯ ಪ್ರಗತಿಯಾಗಿದೆ. ಕಾಮಗಾರಿಗಳಿಗೆ ಟೆಂಡರ್‌ ಕೊಡಲಾಗಿದ್ದು, ಡಿಸೆಂಬರ್‌ ಅಂತ್ಯದೊಳಗೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತ ವಿ.ಬಿ. ಯಮಕನಮರಡಿ, ಡಿಡಿಪಿಐ ಗಜಾನನ ಮನ್ನಿಕೇರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ| ಪರಮೇಶ್ವರ ನಾಯಕ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next