Advertisement

46 ತೊಗರಿ ಖರೀದಿ ಕೇಂದ್ರ ಸ್ಥಾಪನೆ: ರಾಗಪ್ರಿಯಾ

01:16 PM Dec 14, 2021 | Team Udayavani |

ಯಾದಗಿರಿ: 2021-22ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ತೊಗರಿ ಖರೀದಿಸಲು ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ರೈತ ಬಾಂಧವರು ಕೂಡಲೇ ತಮ್ಮ ಹತ್ತಿರದ ತೊಗರಿ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ರೈತರು ನೋಂದಣಿ ಮಾಡುವ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳುಗಳನ್ನು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್‌ಪಿಒಗಳ ಮುಖಾಂತರ ಪ್ರತಿ ಕ್ವಿಂಟಲ್‌ಗೆ ಬೆಂಬಲ ಬೆಲೆ 6,300 ರೂ. ಗಳಿದ್ದು ಪ್ರತಿಯೊಬ್ಬ ರೈತರಿಂದ ಪ್ರತಿ ಎಕರೆಗೆ 7.5 ಕ್ವಿಂಟಲ್‌ರಂತೆ ಗರಿಷ್ಠ 15 ಕ್ವಿಂಟಲ್‌ ತೊಗರಿ ಖರೀದಿಸುವ ಸಂಬಂಧ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ದ್ವಿದಳ ಸಹಕಾರ ಮಾರಾಟ ಮಹಾಮಂಡಳಿ ವತಿಯಿಂದ 36 ಖರೀದಿ ಕೇಂದ್ರಗಳನ್ನು ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ (ತೊಗರಿ ಅಭಿವೃದ್ಧಿ ಮಂಡಳಿ) ವತಿಯಿಂದ 10 ಖರೀದಿ ಕೇಂದ್ರ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 46 ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ರೈತರ ನೋಂದಣಿ ಕಾರ್ಯದ ಕಾಲಾವ ಧಿಯನ್ನು ಡಿ.15ರಿಂದ ಪ್ರಾರಂಭಿಸಿ 45 ದಿನಗಳವರೆಗೆ ಹಾಗೂ ಖರೀದಿ ಕಾಲಾವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಪಂ ಉಪಕಾರ್ಯದರ್ಶಿ ಅಶೋಕ ತೋಟೇದ್‌, ಯಾದಗಿರಿ ಎಪಿಎಂಸಿ ಸಹಾಯಕ ನಿರ್ದೇಶಕ ಶಿವಕುಮಾರ, ಎಪಿಎಂಸಿ ಕಾರ್ಯದರ್ಶಿ ಪ್ರಕಾಶ ಅಯ್ನಾಳಕರ್‌, ಸಹಕಾರ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವ್ಯವಸ್ಥಾಪಕ ವಿನೋದಕುಮಾರ, ಸುರಪುರ ಎಪಿಎಂಸಿ ಕಾರ್ಯದರ್ಶಿ ರಿಯಾಜ್‌ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next