ಮಧುರೈ: ಸಂಕ್ರಾಂತಿ ದಿನದಂದು ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಸುಮಾರು 46 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮಧುರೈನ ಅವನಿಪುರಂನಲ್ಲಿ ಇಂದು ಜಲ್ಲಿಕಟ್ಟು ಸ್ಪರ್ಧೆ ನಡೆದಿದೆ.
ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಮಾರು 300 ಗೂಳಿಗಳನ್ನು ಅಖಾಡಕ್ಕೆ ಬಿಡಲಾಗಿತ್ತು, ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕ ಮಂದಿ ಯುವಕರು ಗಾಯಗೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ 46 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಆಸ್ಟ್ರೇಲಿಯಾ ತಂಡದಲ್ಲಿ ಆಡುತ್ತಿರುವ ಈ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?
ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟನ್ನು ತಮಿಳುನಾಡಿನಲ್ಲಿ ಮಕರ ಸಂಕ್ರಾಂತಿ ಅಥವಾ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಆಡಲಾಗುತ್ತದೆ. ಯುವಕರು ಗೂಳಿಯ ಗೂನನ್ನು ಹಿಡಿಯಲು ಪ್ರಯತ್ನ ಮಾಡುತ್ತಾರೆ. ಈ ರೀತಿ ಯಾರು ಹೆಚ್ಚು ಹೊತ್ತು ಗೂನನ್ನು ಹಿಡಿಯುತ್ತಾರೋ ಅವರನ್ನು ವಿಜೇತರೆಂದು ನಿರ್ಧರಿಸಲಾಗುತ್ತದೆ.