Advertisement

Bengaluru: ಟ್ರಕ್‌ ಟ್ರಮಿನಲ್‌ನಲ್ಲಿ 47 ಕೋಟಿ ರೂ. ಅಕ್ರಮ; ಮಾಜಿ ಎಂಡಿ ಸಿಐಡಿ ವಶಕ್ಕೆ

11:17 AM May 29, 2024 | Team Udayavani |

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್‌ ಟ್ರಮಿನಲ್‌ನಲ್ಲಿ ನಡೆದಿದ್ದ 47.10 ಕೋಟಿ ರೂ. ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಡಿಡಿಯು ಟಿಟಿಎಲ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್‌. ಶಂಕರಪ್ಪ ಅವರನ್ನು 2 ದಿನಗಳ ಕಾಲ ಸಿಐಡಿ ವಶಕ್ಕೆ ಪಡೆದುಕೊಂಡಿದೆ.

Advertisement

ಸೋಮವಾರ ಶಂಕರಪ್ಪನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಮಂಗಳವಾರ ಕೋರ್ಟ್‌ ಗೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿರುವ ಎಸ್‌.ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್‌ನಲ್ಲಿ ಎಂ.ಡಿ ಆಗಿ ಕೆಲಸ ಮಾಡಿದ್ದರು. ಈ ಅಧಿಕಾರದ ಅವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ 47.10 ಕೋಟಿ ರೂ. ಅಕ್ರಮ ನಡೆದಿತ್ತು. ಈ ಸಂಬಂಧ ಸಾಕ್ಷಿ‌ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದರು. ಡಿಡಿಯುಟಿಟಿಎಲ್‌ನಲ್ಲಿ 2021ರಿಂದ 2023ರ ಅವಧಿಯಲ್ಲಿ ನಡೆದಿದ್ದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌. ಶಿವಪ್ರಕಾಶ್‌ ವಿಲ್ಸನ್‌ ಗಾರ್ಡನ್‌ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್‌ 23ರಂದು ಎಫ್ಐಆರ್‌ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

ನಕಲಿ ದಾಖಲೆ ಸೃಷ್ಟಿ?:  ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ 2021ರ ಅ. 25ರಂದು 194ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು. ಟ್ರಕ್‌ ಟರ್ಮಿನಲ್‌ಗ‌ಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ತುರ್ತಾಗಿ ತುಂಡು ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲಾಗಿತ್ತು. 10 ಕೋಟಿ ರೂ.ವರೆಗೆ ತುಂಡು ಗುತ್ತಿಗೆ ನೀಡಲು ಅಕ್ರಮವಾಗಿ ಅನುಮೋದನಾ ನಿರ್ಣಯ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿತ್ತು ಎಂದು ಸಿಐಡಿ ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್‌ ಕಚೇರಿ ಹಾಗೂ ಹಲವರ ಮನೆಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದ ಸಿಐಡಿ ಅಧಿಕಾರಿಗಳು, 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ, ಪರಿಶೀಲನೆ ನಡೆಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next