ಪುಣೆ: ಟ್ಯಾಂಕರೊಂದು ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಮಂದಿ ಗಾಯಗೊಂಡ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ನವಲೆ ಸೇತುವೆಯಲ್ಲಿ ನಡೆದ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪುಣೆಯ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಅಪಘಾತ ಸಂಭವಿಸಿದೆ. ಇದರಲ್ಲಿ ಸುಮಾರು 48 ವಾಹನಗಳು ಜಖಂಗೊಂಡಿವೆ. ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಸ್ಫೋಟ ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ನಕಲಿ! ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ
ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ.
Related Articles
ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಟ್ಯಾಂಕರ್ ನ ಬ್ರೇಕ್ ವೈಫಲ್ಯವಾದ ಕಾರಣದಿಂದ ಟ್ಯಾಂಕರ್ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಘಟನೆ ವೇಳೆ ರಸ್ತೆಗೆ ತೈಲ ಚೆಲ್ಲಿದ್ದು, ಇದರಿಂದ ಇತರ ವಾಹನಗಳು ಜಾರಿ ಸರಣಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ನವಲೆ ಸೇತುವೆಯು ಇದೀಗ ಅಪಘಾತದ ಹಾಟ್ ಸ್ಪಾಟ್ ಆಗುತ್ತಿದೆ. ಕೆಲ ದಿನಗಳ ಹಿಂದೆ ಅತೀ ವೇಗದಿಂದ ಬಂದ ಕಾರೊಂದು ಮಹಿಳೆಗೆ ಢಿಕ್ಕಿ ಹೊಡೆದಿತ್ತು.