Advertisement

Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ

12:03 AM Oct 06, 2024 | Team Udayavani |

ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರಕಾರ ಸಿದ್ಧವಾಗುತ್ತಿದೆ. ಇದೇ ವೇಳೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರಕಾರ ಸಲಹಾ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿಯು 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ.

Advertisement

ಚಲನಚಿತ್ರ ರಂಗದಿಂದ ಖ್ಯಾತ ಸಾಹಿತಿ ಮತ್ತು ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ನಟ ರವಿಚಂದ್ರನ್‌ ಅವರು ಸಲಹಾ ಸಮಿತಿಯಲ್ಲಿದ್ದಾರೆ. ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರವಿಕುಮಾರ್‌, ಡಾ| ಸಿ.ಎಸ್‌. ದ್ವಾರಕನಾಥ್‌, ಹಿರೇಮಗಳೂರು ಕಣ್ಣನ್‌, ರಂಗ ನಿರ್ದೇಶಕ ಬಸವಲಿಂಗಯ್ಯ, ಪ್ರೊ| ರಾಧಾಕೃಷ್ಣ, ನಾಗೇಶ್‌ ಹೆಗಡೆ, ರಂಜಾನ್‌ ದರ್ಗಾ ಸೇರಿ ಹಲವು ಸಾಧಕರು ಸಲಹಾ ಸಮಿತಿಯಲ್ಲಿದಿದ್ದಾರೆ.

ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌ ಮೂಲಕ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಅವಕಾಶ ನೀಡಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಚಿವ ತಂಗಡಗಿ ನೇತೃತ್ವದ ಈ ಸಲಹಾ ಸಮಿತಿ ಮುಂದಿನ ವಾರದಿಂದಲೇ ಪರಿಶೀಲನೆ ನಡೆಸಲಿದೆ. 69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next