Advertisement

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ ತೆರವುಗೊಳಿಸುತ್ತೇವೆ: ಸುಪ್ರೀಂಗೆ ಕೇಂದ್ರ

12:15 PM Aug 11, 2020 | Nagendra Trasi |

ನವದೆಹಲಿ:ಜಮ್ಮು-ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಹೈಸ್ಪೀಡ್ 4ಜಿ ಮೊಬೈಲ್ ಇಂಟರ್ನೆಟ್ ಸರ್ವೀಸ್ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 11, 2020) ಸುಪ್ರೀಂಕೋರ್ಟ್ ಗೆ ತಿಳಿಸಿದೆ.

Advertisement

ಆಗಸ್ಟ್ 15ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದೊಂದು ಜಿಲ್ಲೆಯಲ್ಲಿ 4ಜಿ ಇಂಟರ್ನೆಟ್ ಸರ್ವಿಸ್ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸುವುದಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅಪೆಕ್ಟ್ ಕೋರ್ಟ್ ಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಮಾಧ್ಯಮ ವೃತ್ತಿ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಆಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಗುರಿಪಡಿಸಬೇಕೆಂದು ಕೋರಿ ದೂರು ಸಲ್ಲಿಸಿದ್ದವು. ಕೇಂದ್ರಾಡಳಿತ ಪ್ರದೇಶದಲ್ಲಿ ಅತೀ ವೇಗದ ಮೊಬೈಲ್ ಇಂಟರ್ನೆಟ್ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಮೇ 11ರಂದು ಕೇಂದ್ರ ಮತ್ತು ಜಮ್ಮು ಕಾಶ್ಮೀರಕ್ಕೆ ನೀಡಿದ್ದ ನಿರ್ದೇಶನವನ್ನು ಪಾಲಿಸುವಲ್ಲಿ ವಿಫಲವಾಗಿರುವುದಾಗಿ ಆರೋಪಿಸಿದ್ದವು.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ

ಕಳೆದ ಬಾರಿ ನಡೆದ ವಿಚಾರಣೆಯಲ್ಲಿಯೂ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ 4ಜಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರಾರಂಭಿಸುವ ಬಗ್ಗೆ ಸಾಧ್ಯವಾದಷ್ಟು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿತ್ತು.

Advertisement

ಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಿಸಿ ಮುರ್ಮು ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ 4ಜಿ ಸೇವೆ ಪುನರಾರಂಭಿಸಲು ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದರು. ಈ ಬಗ್ಗೆ ನೀವು ವಿವರಣೆ ನೀಡಬೇಕೇಕು ಎಂದು ಜಸ್ಟೀಸ್ ಆರ್ ಸುಭಾಶ್ ರೆಡ್ಡಿ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ನೇಮಕ

ಜಿಎಸ್ ಮುರ್ಮು ಅವರು ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಮನೋಜ್ ಸಿನ್ನಾ ಅವರು ಗವರ್ನರ್ ಆಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: 370 ರದ್ದು ಎಫೆಕ್ಟ್: ಈಗ ಜಮ್ಮು-ಕಾಶ್ಮೀರದಲ್ಲಿ ಉಗ್ರ ಸಂಘಟನೆ, ಉಗ್ರರ ಸ್ಥಿತಿ ಏನಾಗಿದೆ?

Advertisement

Udayavani is now on Telegram. Click here to join our channel and stay updated with the latest news.

Next