Advertisement

ಸೌಥಾಂಪ್ಟನ್ ಟೆಸ್ಟ್ : ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ 

03:09 PM Aug 30, 2018 | |

ಸೌಥಾಂಪ್ಟನ್ : ನಾಟಿಂಗಂ ಟೆಸ್ಟ್ ಪಂದ್ಯ ಗೆದ್ದು ಹುಮ್ಮಸ್ಸಿನಲ್ಲಿರುವ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು  ಫೀಲ್ಡಿಂಗ್ ಮಾಡಲಿದೆ. ಟಾಸ್ ಗೆದ್ದ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 

Advertisement

ಈ ಪಂದ್ಯಕ್ಕೆ ಭಾರತ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ನಾಟಿಂಗಂ ಟೆಸ್ಟ್ ವಿಜೇತ ತಂಡವನ್ನೇ  ಮುಂದುವರಿಸಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಬದಲಾವಣೆ ಮಾಡಿಕೊಳ್ಳದೇ ಆಡುತ್ತಿದೆ. ಇಂಗ್ಲೆಂಡ್ ತಂಡ ಈ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಂಡಿದ್ದು ಕ್ರಿಸ್ ವೋಕ್ಸ್ ಬದಲಿಗೆ ಸ್ಯಾಮ್ ಕರ‍್ರನ್ ಮತ್ತು ಆಲಿವರ್ ಪೋಪ್ ಬದಲಿಗೆ ಮೋಯಿನ್ ಅಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಈ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಂ ಇಂಡಿಯಾ ನಾಟಿಂಗಂ ಟೆಸ್ಟ್ ಪಂದ್ಯದಲ್ಲಿ 203 ರನ್ ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸಲು ಕೊಹ್ಲಿ ನಾಯಕತ್ವದ ಭಾರತ ತಂಡ ಸಜ್ಜಾಗಿದೆ. 

ಉಭಯ ತಂಡಗಳು:
ಭಾರತ: ವಿರಾಟ್ ಕೊಹ್ಲಿ, (ನಾಯಕ) ಶಿಖರ್ ಧವನ್, ಲೋಕೇಶ್ ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್( ವಿಕೆಟ್ ಕೀಪರ್) ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಜೊ ರೂಟ್ (ನಾಯಕ), ಅಲಿಸ್ಟರ್ ಕುಕ್, ಕೀಟನ್ ಜೆನ್ನಿಂಗ್ಸ್, ಜಾನಿ ಬೆರಿಸ್ಟೊ, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್) ಮೋಯಿನ್ ಆಲಿ, ಸ್ಯಾಮ್ ರ‍್ರನ್, ಆದಿಲ್ ರಶೀದ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್. 

Advertisement

Udayavani is now on Telegram. Click here to join our channel and stay updated with the latest news.

Next