Advertisement

ದಿಲ್ಲಿ ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರಲ್ಲ: ಗೃಹ ಸಚಿವ

09:00 AM Jun 29, 2020 | mahesh |

ಹೊಸದಿಲ್ಲಿ: ದಿಲ್ಲಿಯಲ್ಲಿ ಇನ್ನೂ ಕೋವಿಡ್ ಸೋಂಕು ಸಾಮುದಾಯಿಕವಾಗಿ ವ್ಯಾಪಿಸಿಲ್ಲ. ಅಷ್ಟೇ ಅಲ್ಲ, ಜುಲೈ ಅಂತ್ಯದ ವೇಳೆಗೆ ಇಲ್ಲಿ 5.5 ಲಕ್ಷ ಪ್ರಕರಣಗಳು ಪತ್ತೆಯಾಗುವುದೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರಲಿದೆ ಎನ್ನುವ ಮೂಲಕ ಉಪಮುಖ್ಯ­ಮಂತ್ರಿ ಮನೀಷ್‌ ಸಿಸೋಡಿಯಾ ಅವರು ಜನರಲ್ಲಿ ಭೀತಿ ಉಂಟುಮಾಡುವ ಕೆಲಸ ಮಾಡಿದ್ದಾರೆ ಎಂದೂ ಶಾ ಅಭಿಪ್ರಾಯ­ಪಟ್ಟಿದ್ದಾರೆ.

Advertisement

ರವಿವಾರ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಜುಲೈ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗಿ, ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಕೊರತೆ ಉಂಟಾಗುತ್ತದೆ, ಜಾಗವೇ ಇರುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದರಿಂದ, ದೆಹಲಿ ಜನತೆ ಭೀತಿಗೊಳಗಾಗಿ ಬೇರೆಡೆಗೆ ವಲಸೆ ಹೋಗಲಾರಂಭಿಸಿದ್ದಾರೆ ಎಂದು ಹೇಳಿದ್ದಾರೆ. ಜತೆಗೆ, ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿರುವ ಕಾರಣ, ಜುಲೈ ಅಂತ್ಯದಲ್ಲಿ ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

ಕಂಟೈನ್ಮೆಂಟ್‌ ವಲಯ 417: ದೆಹಲಿಯಲ್ಲಿ ರವಿವಾರ ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ 417ಕ್ಕೇರಿದೆ. ಕೇಂದ್ರದ ಸೂಚನೆ ಮೇರೆಗೆ ಇಂಥ ವಲಯಗಳನ್ನು ಮರು ಗುರುತಿಸುವ ಪ್ರಕ್ರಿಯೆ ಆರಂಭವಾದ ಕಾರಣ, ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆ 280ರಿಂದ 417ಕ್ಕೇರಿದೆ. ಈವರೆಗೆ ಇಲ್ಲಿ 2.45 ಲಕ್ಷ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next