ಜಕಾರ್ತಾ : ಇಂಡೋನೇಷ್ಯಾದ ಮುಖ್ಯ ದ್ವೀಪವಾದ ಜಾವಾದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಲವು ಕಟ್ಟಡಗಳು ಹಾನಿಗೊಳಗಾಗಿವೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿತ್ತು. ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಹಾನಿಗೀಡಾಗಿವೆ ಎಂದು ಸಿಯಾಂಜೂರ್ ಜಿಲ್ಲೆಯ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಜಕಾರ್ತದ ಹೆಚ್ಚಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. ರಾಜಧಾನಿಯಲ್ಲಿನ ಎತ್ತರದ ಕಟ್ಟಡಗಳು ಮೂರು ನಿಮಿಷಗಳಿಗಿಂತ ಹೆಚ್ಚು ಕಾಲ ನಡುಗಿದವು ಹಲವರನ್ನು ಸ್ಥಳಾಂತರಿಸಲಾಯಿತು. ಕಂಪನವು ತುಂಬಾ ಪ್ರಬಲವಾಗಿದ್ದು, ನನ್ನ ಸಹೋದ್ಯೋಗಿಗಳು ಮತ್ತು ನಾನು ನಮ್ಮ ಕಚೇರಿಯಿಂದ ಒಂಬತ್ತನೇ ಮಹಡಿಯಲ್ಲಿ ತುರ್ತಾಗಿ ಹೊರ ಬಂದೆವು ಎಂದು ದಕ್ಷಿಣ ಜಕಾರ್ತಾದ ಉದ್ಯೋಗಿಯೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.