Advertisement

Defence ಏರೋಸ್ಪೇಸ್‌ ಪಾರ್ಕ್‌ನಲ್ಲಿ ಖರ್ಗೆ ಕುಟುಂಬಕ್ಕೆ 5 ಎಕರೆ ಭೂಮಿ: ಲೆಹರ್‌ ಸಿಂಗ್‌

01:19 AM Aug 26, 2024 | Team Udayavani |

ಬೆಂಗಳೂರು: ಬೆಂಗಳೂರು ಸಮೀಪದ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಖರ್ಗೆ ಕುಟುಂಬಕ್ಕೆ ಭೂಮಿ ಮಂಜೂರು ಮಾಡಿರುವುದನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌ ಪ್ರಶ್ನಿಸಿದ್ದಾರೆ.

Advertisement

ತಮ್ಮ ಎಕ್ಸ್‌ ಖಾತೆಯಲ್ಲಿ ದಾಖಲೆ ಹಂಚಿಕೊಂಡಿರುವ ಅವರು, ಕೆಐಎಡಿಬಿ ಭೂಮಿ ಪಡೆಯಲು ಖರ್ಗೆ ಕುಟುಂಬ ಯಾವಾಗ ಏರೋಸ್ಪೇಸ್‌ ಉದ್ಯಮಿಯಾಗಿದ್ದು? ಇದು ಅಧಿಕಾರದ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಸ್ವಹಿತಾಸಕ್ತಿ ಸಂಘರ್ಷವಲ್ಲವೇ? ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) 45.94 ಎಕರೆಗಳಲ್ಲಿ 5 ಎಕರೆ ಭೂಮಿಯನ್ನು ಮಂಜೂರು ಮಾಡಿರುವ ದಾಖಲೆ ಬಹಿರಂಗವಾಗಿದೆ. ಬೆಂಗಳೂರು ಸಮೀಪದ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಎಸ್ಸಿ ಕೋಟಾದಡಿಯಲ್ಲಿ ನಾಗರಿಕ ಸೌಲಭ್ಯಗಳಿಗಾಗಿ ಮೀಸಲಾಗಿದೆ.

2024ರ ಮಾರ್ಚ್‌ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಈ ಹಂಚಿಕೆಗೆ ಒಪ್ಪಿಗೆ ನೀಡಿ ದರೂ ಹೇಗೆ? ಕೆಐಎಡಿಬಿ ಭೂಮಿಗೆ ಅರ್ಹರಾಗಲು ಖರ್ಗೆ ಕುಟುಂಬವು ಯಾವಾಗ ಏರೋಸ್ಪೇಸ್‌ ಉದ್ಯಮಿಗಳಾದರು? ಈ ಹಂಚಿಕೆಯ ವಿಷಯ ಆರ್‌ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರ ಕಚೇರಿಗೂ ತಲುಪಿದೆ. ಮುಡಾ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯನವರು ಬಿಟ್ಟುಕೊಡುವಂತಹ ಪರಿಸ್ಥಿತಿ ಇರುವಂತೆ ಖರ್ಗೆ ಕುಟುಂಬ ಅಂತಿಮವಾಗಿ ಈ ಭೂಮಿಯನ್ನು ಬಿಟ್ಟುಕೊಡಬೇಕಾದೀತು ಎಂದು ಭವಿಷ್ಯ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next