Advertisement

ದ.ಕನ್ನಡ ಜಿಲ್ಲೆಗೆ ಶೀಘ್ರ 15 ಆ್ಯಂಬುಲೆನ್ಸ್ ಮಂಜೂರು: ಡಿಸಿಎಂ ಅಶ್ವಥ್ ನಾರಾಯಣ

05:06 PM Jul 17, 2020 | keerthan |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲು 25,000 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು ಹಾಗೂ 15 ಆಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಹೇಳಿದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಕುರಿತು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಇಂದು ಡಿಸಿಎಂ ಅಶ್ವತ್ ನಾರಾಯಣ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತುರ್ತು ಸಭೆ ನಡೆಸಿದರು.

ಸಭೆಯ ನಂತರ ದ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಹಾಗೂ ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ,  ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು.

ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಡಿಸಿಎಂ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next