Advertisement

Ayushman Bharat ದಿಂದ 5 ಕೋಟಿ ಮಂದಿಗೆ ಲಾಭ

09:36 PM May 31, 2023 | Team Udayavani |

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಇದುವರೆಗೂ ದಾಖಲೆಯ 5 ಕೋಟಿ ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 61,501 ಕೋಟಿ ರೂ. ಮೊತ್ತದ ಉಚಿತ ಚಿಕಿತ್ಸೆಯನ್ನು ನಾಗರಿಕರು ಪಡೆದಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ತಿಳಿಸಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವರೆಗೆ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ. ಪ್ರಸ್ತುತ 12 ಕೋಟಿ ಕುಟುಂಬಗಳು ಈ ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ. ಆಯುಷ್ಮಾನ್‌ ಭಾರತ್‌ ಯೋಜನೆಯು 2018ರ ಸೆಪ್ಟೆಂಬರ್‌ನಲ್ಲಿ ಅನುಷ್ಠಾನಕ್ಕೆ ಬಂದಿದ್ದು, ಇದುವರೆಗೂ 23.39 ಕೋಟಿ ಜನರಿಗೆ ಆಯುಷ್ಮಾನ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯ ಚಿಕಿತ್ಸೆಗೆ ಇದರಿಂದ ಸದುಪಯೋಗವಾಗಿದೆ. 2022-23 ವರ್ಷದಲ್ಲಿ ಈ ಯೋಜನೆಯಡಿ 1.65 ಕೋಟಿ ರೋಗಿಗಳು ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಎನ್‌ಎಚ್‌ಎ ಮಾಹಿತಿ ನೀಡಿದೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next